ಬ್ರಹ್ಮಾವರ: ಫ್ರೆಂಡ್ಸ್ ಕ್ಲಬ್ ಸಾಲಿಕೇರಿ ಆಶ್ರಯದಲ್ಲಿ, ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಹಾರಾಡಿಯ ವಿದ್ಯಾಮಂದಿರ ಶಾಲೆಯಲ್ಲಿ ನ.03ರಂದು ನಡೆಯಲಿದೆ.
ಬೆಳಗ್ಗೆ 9:00ಕ್ಕೆ ಕಾರ್ಯಕ್ರಮ ನಡೆಯಲಿದ್ದು ವಿವಿಧ ರೀತಿಯ ದಂತ ಸಮಸ್ಯೆಗಳಿಗೆ ಚಿಕಿತ್ಸೆ ದೊರಕಲಿದೆ.
ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಬೇಕೆಂದು ಸಂಘಟಕರು ಕೋರಿದ್ದಾರೆ.