ಮಂಗಳೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿನಿ ತ್ವಯಿಬಾ (18) ಎಂಬವರು ಅಸೌಖ್ಯದಿಂದ ಮೃತಪಟ್ಟ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾಸರಗೋಡಿನ ಮುಗು ರೋಡ್ ನಿವಾಸಿ ಮುಹಮ್ಮದ್ – ಪೌಸಿಯ ದಂಪತಿಯ ಪುತ್ರಿಯಾದ ತ್ವಯಿಬಾ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ವರ್ಷ ಬಿಟಿಟಿಎಂ ವಿದ್ಯಾರ್ಥಿನಿಯಾದ್ದರು. ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ