ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ೧೬ ನೇ ಬಜೇಟ್ ಮಂಡಿಸುತ್ತಿದ್ದಾರೆ. ಈ ಸಲ ಬಜೇಟ್‌ನಲ್ಲಿ ಮೀನುಗಾರಿಕೆ ಇಲಾಖೆಗೆ ಸಿಕ್ಕಿದ್ದೇನು ಎನ್ನುವುದರ ಮಾಹಿತಿ ಇಲ್ಲಿ ನೀಡಲಾಗಿದೆ.
ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿ.
ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ
ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ.
ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.
ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟುಸಹಾಯಧನ.
ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭ
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು “ಮಲ್ಟಿ-ಲೆವೆಲ್ ಪಾರ್ಕಿಂಗ್” ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ
ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು, ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಕೆಗೆ ಕ್ರಮ