ಮಂಗಳೂರು: ಬಂಧನ ವೇಳೆ ರೌಡಿಶೀಟರ್ ಒಬ್ಬ ಸಿಸಿಬಿ ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.
ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್(43) ಹಲ್ಲೆ ನಡೆಸಿದ ರೌಡಿಶೀಟರ್ ಆಗಿದ್ದು, ಸದ್ಯ ಪೊಲೀಸರು ಬಂಧಿಸಿದ್ದಾರೆ.
ದಾವೂದ್ ಹಲವಾರು ಗಂಭೀರ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪಿಯಾಗಿದ್ದು, ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆಯ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ಎಂದು ತಿಳಿದು ಬಂದಿತ್ತು.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪಿಎಸ್ಐ ನರೇಂದ್ರ ನೇತೃತ್ವದ ತಂಡ ದಾವೂದ್‌ನನ್ನು ಬಂಧಿಸಲು ಮುಂದಾಗಿದೆ. ಕಾರ್ಯಾಚರಣೆ ವೇಳೆ ದಾವೂದ್ ಬಂಧನದಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಪಿಎಸ್ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ನಡುವೆಯೂ ತಂಡ ಆತನನ್ನು ಹಡೆಮುರಿ ಕಟ್ಟಿ ದಾವೂದ್‌ನನ್ನು ಬಂಧಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ.
ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಿಆರ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಗಂಭೀರ ಅಪರಾಧಗಳಲ್ಲಿ ತೊಡಗಿಸಿಕೊಂಡಿರುವ ಆರೋಪಿಯಾಗಿದ್ದು. ಉಳ್ಳಾಲ ಮತ್ತು ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ನ್ಯಾಯವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ