ಸಾಸ್ತಾನ: ರಾಷ್ಟ್ರೀಯ ಹೆದ್ದಾರಿ 66ರ ಸಮಸ್ಯೆಗಳ ಬಗ್ಗೆ ಎನ್‌ಎಚ್‌ಎಐ ಮತ್ತು ಕೆಕೆಆರ್ ಕಂಪೆನಿಯ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವ ಹಿನ್ನೆಲೆ ನ.28ರಂದು ಸಾಲಿಗ್ರಾಮ ಚಿತ್ರಪಾಡಿಯ ಮಾರಿಗುಡಿ ಎದುರು ಪ್ರತಿಭಟನೆ ನಡೆಯಲಿದೆ. ಈ ಹಿನ್ನೆಲೆ ಇಂದು (ನ.24ರಂದು) ಸಂಜೆ 5.00ಕ್ಕೆ ಶಿವಕೃಪ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ರಾಷ್ಟ್ರೀಯ ಹೆದ್ದಾರಿ66ರ ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಅಧ್ಯಕ್ಷ ಶ್ಯಾಮ್ ಸುಂದರ್ ನಾಯಿರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.