• August 22, 2025
  • Last Update August 21, 2025 9:01 pm
  • Australia

ರಾಜ್ಯ ಬಜೆಟ್‌2025: ಅನುಗ್ರಹ ಯೋಜನೆಯ ಸಹಾಯಧನ ಮಿತಿ ಹೆಚ್ಚಳ

ರಾಜ್ಯ ಬಜೆಟ್‌2025: ಅನುಗ್ರಹ ಯೋಜನೆಯ ಸಹಾಯಧನ ಮಿತಿ ಹೆಚ್ಚಳ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ನಲ್ಲಿ ಹೈನುಗಾರಿಕೆ ಮತ್ತು ಪಶುಸಂಗೋಪನೆಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇದರಲ್ಲಿ ಪ್ರಮುಖವಾದದ್ದು

ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದ್ದು, ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ. ಗಳಿಗೆ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26ನೇಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ

2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ನಿರ್ಮಾಣ.

ಅಮೃತ್‌ ಮಹಲ್‌ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್‌ ಮಹಲ್‌ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ.

ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್‌, ಕಿಲಾರಿ, ಅಮೃತ್‌ ಮಹಲ್‌ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಮೀಸಲು.

ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ.

    administrator

    Related Articles

    Leave a Reply

    Your email address will not be published. Required fields are marked *

    error: Content is protected !!