ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ತಮ್ಮ 16 ನೇ ಬಜೆಟ್ ಕೇವಲ ಪ್ರಚಾರಕ್ಕೆ ಸೀಮಿತವಾದ ಬಜೆಟ್ ಆಗಿದ್ದು, ಜಿಲ್ಲೆಗೆ ಗುರುತಿಸಬಹುದಾದ ಯಾವುದೇ ದೊಡ್ಡ ಯೋಜನೆಗಳನ್ನು ಘೋಷಿಸಿಲ್ಲ. ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೋಸ್ಕರ ಮಂಡಿಸಿದ ಬಜೆಟ್ ನಂತೆ ಕಾಣುತ್ತಿದೆ.
ಜಿಲ್ಲೆಯ ಪ್ರಮುಖ ಬೇಡಿಕೆಗಳಾದ ಮೆಡಿಕಲ್ ಕಾಲೇಜು, ಕೃಷಿಕಾಲೇಜು , ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳ ಸ್ಥಾಪನೆಯ ಕನಸು ನನಸಾಗದೆಯೇ ಉಳಿದಿದೆ. ಜಿಲ್ಲೆಯ ಯುವಜನತೆಗೆ ಅನ್ಯಾಯ ಮಾಡಿದ್ದಾರೆ ಜಿಲ್ಲೆಯ ಪ್ರವಾಸೋದ್ಯಮವನ್ನು ಕಡೆಗಣಿಸಿದ್ದು ಉಡುಪಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಒಟ್ಟಾರೆ ಸಿದ್ದರಾಮಯ್ಯನವರ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.