ಬ್ರಹ್ಮಾವರ: ಇಲ್ಲಿಗೆ ಸಮೀಪದ ಕುಂಜಾಲು ಪೇಟೆಯ ರಾಮಮಂದಿರ ಬಳಿ ದನದ ರುಂಡ ಎಸೆದ ಪ್ರಕರಣದಲ್ಲಿ ಗೋ ಹತ್ಯೆ ಯನ್ನು ಖಂಡಿಸಿದ ವಿಶ್ವಹಿಂದೂಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರ ವಿರುದ್ದ ಕೇಸ್ ದಾಖಲಿಸಲು ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪೋಲಿಸ್ ಇಲಾಖೆಗೆ ಒತ್ತಡ ಹಾಕಿ ಸ್ವಯಂ ಪ್ರೇರಿತ ಕೇಸು ದಾಖಲಿಸುವುದರಲ್ಲಿ ಯಶಸ್ವಿಯಾಗಿರುವುದು ಕಾಂಗ್ರೆಸ್ ಮತ್ತೊಮ್ಮೆ ಹಿಂದುತ್ವದ ವಿರೋದಿ ಎನ್ನುವುದು ಸಾಬೀತಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ್ಯ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆರೋಪಿಸಿದ್ದಾರೆ.
ಅವರು ಬಿಡುಗಡೆಗೊಳಿಸಿದ ಪತ್ರಿಕಾ ಪ್ರಕಟನೆಯಲ್ಲಿ, ಗೋ ಕಳ್ಳರು, ಗೋ ಹಂತಕರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ದ ಪರಿವಾರ ಬಿಜೆಪಿ ಹಾಗೂ ಸಂಘಟನೆಯ ಕಾರ್ಯಕರ್ತರ ಹೋರಾಟ ನಿಲ್ಲದು, ಕುಂಜಾಲಿನ ಘಟನೆಯಲ್ಲಿ ಬಂದಿತ ಆರೋಪಿಗಳು ಹಿಂದೂಗಳು ಎನ್ನುವ ಕಾರಣಕ್ಕೆ ಸಂಭ್ರಮಿಸುತ್ತಿರುವ ಜಿಹಾದಿ ಮಾನಸಿಕತೆಯ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಜಿಲ್ಲೆಯಲ್ಲಿ ನೂರಾರು ಗೋಸಾಗಾಟ ಪ್ರಕರಣಗಳಲ್ಲಿ ಭಾಗಿಯಾದ ಅಪರಾಧಿಗಳನ್ನು ಗೂಂಡಾ ಕಾಯ್ದೆ ಅಡಿ ಸೇರಿಸಲಿ; ಗೋಹತ್ಯೆ ನಿಷೇಧದ ಹೋರಾಟದಲ್ಲಿ ಕೈ ಜೋಡಿಸಲಿ ಎಂದು ಸವಾಲು ಹಾಕಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕೃತ ಮನವಿ ನೀಡಿ ಗೋರಕ್ಷಣೆಗೆ ಕ್ರಮ ಕೈಗೊಳ್ಳಿ. ಅದನ್ನು ಬಿಟ್ಟು ನಿಮ್ಮ ಹಿಂದುತ್ವ ಪ್ರದರ್ಶಿಸುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ