ಉಡುಪಿ: ಇಲ್ಲಿನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಭಗವದ್ವಜ ಹಿಡಿದು ಪುರಮೆರವಣಿಗೆಗೆ ಚಾಲನೆ ನೀಡಿರುವುದು ದಿನಕ್ಕೊಂದು ತಿರುವು ಪಡೆಯುತ್ತಿದೆ.
ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಡಿಸಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಇದನ್ನು ವಿರೋದಿಸಿರುವ ಬಿಜೆಪಿ ಇದು ಹಿಂದೂ ಸಮಾಜಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಬಿಲ್ಲಾಡಿ, ಭವ್ಯ ಪರಂಪರೆ ಹೊಂದಿರುವ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯದಲ್ಲಿ ರಾಜಕೀಯ ಮಾಡಿರುವುದು ಕಾಂಗ್ರೇಸ್ ಹಿಂದೂ ವಿರೋಧಿ ಮನಸ್ಥಿತಿಯನ್ನು ತಿಳಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಇದೇ ರೀತಿ ಮುಂದುವರಿದರೆ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ ಎಂದು ಎಚ್ಚರಿಕೆ ನೀಡಿದರು.







