ಕೋಟ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

February 10, 2026 4:16 PM

ಕೋಟ ಫೆಬ್ರವರಿ 10: ವರ್ಲ್ಡ್ ಕಪ್ ಟಿ-20 ಪಂದ್ಯಾವಳಿಯ ಹೆಸರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆನ್‌ಲೈನ್ ಮೂಲಕ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಘಟನೆಯ ವಿವರ:
ಸೋಮವಾರ ಉಡುಪಿಯ ಪಾಂಡೇಶ್ವರ ಗ್ರಾಮದ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕ್ರಿಕೆಟ್ ಬೆಟ್ಟಿಂಗ್ ಆಡಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಆರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸಿದರು.
ಪೊಲೀಸರ ಬರುತ್ತಿದ್ದಂತೆ ಬೆಟ್ಟಿಂಗ್ ಆಡುತ್ತಿದ್ದ ಸಾರ್ವಜನಿಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಆದರೆ, ಬೆಟ್ಟಿಂಗ್ ದಂಧೆಯ ನೇತೃತ್ವ ವಹಿಸಿದ್ದ ಹಂಗಾರಕಟ್ಟೆ ಬಾಳ್ಕುದ್ರು ಗ್ರಾಮದ ಮನಿತ್ (26) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂದರ್ಭ ಬೆಟ್ಟಿಂಗ್ ಗೆ ಬಳಸುತ್ತಿದ್ದ ಐಫೋನ್ ಮತ್ತು ₹800ನಗದು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿ ಮನಿತ್, ಬ್ರಹ್ಮಾವರದ ಭರತ್ ಎಂಬಾತನೊಂದಿಗೆ ಸೇರಿಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಓಮನ್ ಹಾಗೂ ಜಿಂಬಾಂಬ್ವೆ ನಡುವಿನ ಪಂದ್ಯಕ್ಕೆ ಸಂಬಂಧಿಸಿದಂತೆ ‘PARKKER777’ ಎಂಬ ಆನ್‌ಲೈನ್ ಅಪ್ಲಿಕೇಶನ್ ಬಳಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ನಡೆಸುತ್ತಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಪೊಲೀಸರು ಪ್ರಕರಣದ ಮತ್ತೊಬ್ಬ ಆರೋಪಿ ಭರತ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Harish Kiran Thunga

Harish Kiran Thunga is a journalist and editor based in Karnataka, India. He is actively involved in Udupi District Working Journalist Associations in the Udupi district. He serves as the Editor in Chief at Newsrays.in, a regional news portal. He also manages the Newsrays live YouTube channel, which features local news and short stories.

Join WhatsApp

Join Now

Leave a Comment

You cannot copy content of this page