ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಹುಟ್ಟುಹಬ್ಬ ಆಚರಣೆ – ಸಾಲಿಗ್ರಾಮದ ಹೊಸಬದುಕು ಆಶ್ರಮದಲ್ಲಿ ಸಮಾಜಮುಖಿ ಕಾರ್ಯ

February 12, 2026 4:37 PM

ಸಾಲಿಗ್ರಾಮ, ಫೆಬ್ರವರಿ 12:
ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಸಾಲಿಗ್ರಾಮದ ಹೊಸಬದುಕು ಆಶ್ರಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜಮುಖಿ ಕಾರ್ಯಗಳ ಮೂಲಕ ಸಾಮಾನ್ಯ ಜನರೊಂದಿಗೆ ಬೆರೆತಿರುವ ಅಜಿತ್ ಕುಮಾರ್ ಶೆಟ್ಟಿ ಅವರ ಹುಟ್ಟುಹಬ್ಬದ ಪ್ರಯುಕ್ತ ಆಶ್ರಮದ ಸದಸ್ಯರಿಗೆ ಹೊಸ ಬಟ್ಟೆಗಳನ್ನು ವಿತರಿಸಿ, ವಿಶೇಷ ಊಟವನ್ನು ನೀಡಲಾಯಿತು.

ಈ ಆಚರಣೆಯು ಕೇವಲ ಹುಟ್ಟುಹಬ್ಬದ ಸಂಭ್ರಮಕ್ಕೆ ಸೀಮಿತವಾಗದೆ, ಹೊಸಬದುಕು ಆಶ್ರಮದ ಸದಸ್ಯರಿಗೆ ಸಂತೋಷವನ್ನು ತರುವ ಮತ್ತು ಅವರ ಜೀವನದಲ್ಲಿ ಹೊಸ ಭರವಸೆ ಮೂಡಿಸುವ ಪ್ರಯತ್ನವಾಗಿದೆ. ಈ ಮೂಲಕ ಅಜಿತ್ ಕುಮಾರ್ ಶೆಟ್ಟಿ ಅವರ ಸಾಮಾಜಿಕ ಕಳಕಳಿ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ಕಾಂಗ್ರೆಸ್‌ ಮುಖಂಡ ಕಿಶನ್‌ ಹೆಗ್ಡೆ ಕೊಳ್ಕೆಬೈಲು ಹೇಳಿದರು.


ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಲೀಗಲ್ ಸೆಲ್‌ನ ಅಧ್ಯಕ್ಷ ಸುಕುಮಾರ್ ಶೆಟ್ಟಿ ,ಚಂದ್ರಶೇಖರ್ ಶೆಟ್ಟಿ, ರಮೇಶ್ ಮೆಂಡನ್, ಸುದರ್ಶನ್ ಉಪಸ್ಥಿತರಿದ್ದರು. ‘ಹೊಸ ಬದುಕು’ ಆಶ್ರಮದ ಮುಖ್ಯಸ್ಥ ವಿನಯ್ ಚಂದ್ರ ಸಾಸ್ತಾನ ಸ್ವಾಗತಿಸಿದರು. ಅಜಿತ್ ಶೆಟ್ಟಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೆರೆದಿದ್ದ ಅತಿಥಿಗಳು ಆಶ್ರಮದ ಸದಸ್ಯರೊಂದಿಗೆ ಬೆರೆತು, ಅವರಿಗೆ ಶುಭ ಹಾರೈಸಿದರು.

Harish Kiran Thunga

Harish Kiran Thunga is a journalist and editor based in Karnataka, India. He is actively involved in Udupi District Working Journalist Associations in the Udupi district. He serves as the Editor in Chief at Newsrays.in, a regional news portal. He also manages the Newsrays live YouTube channel, which features local news and short stories.

Join WhatsApp

Join Now

Leave a Comment

You cannot copy content of this page