ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ರೋಟರಿ–ರೋಟರ‍್ಯಾಕ್ಟ್ ಸಂಯುಕ್ತ ಆಯೋಜನೆ
ಕುಂದಾಪುರ (ಮಾರ್ಚ್ 25): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋಟರ‍್ಯಾಕ್ಟ್ ಕ್ಲಬ್, ರೋಟರಿ ಕ್ಲಬ್ ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಅಧ್ಯಕ್ಷರು ಹಾಗೂ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪೆನಿಯ ಸೀನಿಯರ್ ಸೇಲ್ಸ್ ಮ್ಯಾನೇಜರ್ ಆಗಿರುವ ರೋಟಾರಿಯನ್ ಗುರುರಾಜ ಕೊತ್ವಾಲ್ ತರಬೇತುದಾರರಾಗಿ ಭಾಗವಹಿಸಿ ಮಾತನಾಡಿದರು. ತುರ್ತು ಸಂದರ್ಭದಲ್ಲಿ ಪ್ರಾಣ ರಕ್ಷಕವಾಗಿರುವ ಪ್ರಥಮ ಚಿಕಿತ್ಸೆಯ ಮಹತ್ವವನ್ನು ವಿವರಿಸಿದ ಅವರು, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ಅರಿವು ಅಗತ್ಯವಿದೆ ಎಂದು ಹೇಳಿದರು. ಹೃದಯಾಘಾತ ಸಂಭವಿಸಿದಾಗ ಕೈಗೊಳ್ಳಬೇಕಾದ ತಕ್ಷಣದ ಕ್ರಮಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿ, ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಪ್ರಾಯೋಗಿಕ ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಅವರು ಮಾತನಾಡಿ, ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಸಮಾಜಮುಖಿ ಜವಾಬ್ದಾರಿಯನ್ನು ಬೆಳೆಸಲು ಸಹಕಾರಿಯಾಗುತ್ತದೆ ಎಂದರು.
ರೋಟರಿ ಕ್ಲಬ್ ಕುಂದಾಪುರ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ವಿನಯಾ ವಿ. ಶೆಟ್ಟಿ ಸ್ವಾಗತಿಸಿದರು. ಶ್ರೀ ಗಿರಿರಾಜ್ ಭಟ್ ವಂದನಾರ್ಪಣೆ ಮಾಡಿದರು. ದ್ವಿತೀಯ ಬಿ.ಕಾಂ. (ಬಿ) ವಿಭಾಗದ ವಿದ್ಯಾರ್ಥಿನಿ ಐಶ್ವರ್ಯ ಸಂಪನ್ಮೂಲ ವ್ಯಕ್ತಿಯ ಪರಿಚಯ ನೀಡಿದರು. ದ್ವಿತೀಯ ಬಿ.ಕಾಂ. (ಸಿ) ವಿಭಾಗದ ರಕ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.










