ನಾಗರ ಪಂಚಮಿ ಪ್ರಯುಕ್ತ ನಾಳೆ ಸಾರ್ವತ್ರಿಕ ರಜೆ

August 16, 2026 9:52 PM

ಉಡುಪಿ: ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ನಾಳೆ ಅಂದರೆ ಆಗಸ್ಟ್ 17, 2026ರ ಸೋಮವಾರದಂದು ಉಡುಪಿ ಜಿಲ್ಲೆಯಾದ್ಯಂತ ಸ್ಥಳೀಯ ಸಾರ್ವಜನಿಕ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ಕರಾವಳಿ ಭಾಗದಲ್ಲಿ ಅತ್ಯಂತ ಪವಿತ್ರ ಹಾಗೂ ಪ್ರಮುಖ ಧಾರ್ಮಿಕ ಹಬ್ಬವಾಗಿ ಆಚರಿಸಲ್ಪಡುವ ನಾಗರ ಪಂಚಮಿಯು ಜನರ ನಂಬಿಕೆ ಮತ್ತು ಭಕ್ತಿಯ ಸಂಕೇತವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸ್ಥಳೀಯ ಪರಿಸ್ಥಿತಿಗನುಸಾರವಾಗಿ ರಜೆ ಘೋಷಿಸಲು ಸರ್ಕಾರದ ಸೂಚನೆಯ ಮೇರೆಗೆ ಈ ನಿರ್ಧಾರ ತಳೆಯಲಾಗಿದೆ.

ಈ ಆದೇಶದನ್ವಯ ಆಗಸ್ಟ್ 17ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಹಾಗೂ ಖಾಸಗಿ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ.

Harish Kiran Thunga

Harish Kiran Thunga is a journalist and editor based in Karnataka, India. He is actively involved in Udupi District Working Journalist Associations in the Udupi district. He serves as the Editor in Chief at Newsrays.in, a regional news portal. He also manages the Newsrays live YouTube channel, which features local news and short stories.

Join WhatsApp

Join Now

Leave a Comment

You cannot copy content of this page