ಕಾಂಗ್ರೆಸ್ ಮುಖಂಡ ನಾಗೇಂದ್ರ ಪುತ್ರನ್ ಬಂಧನಕ್ಕೆ ಬಿಜೆಪಿ ಯುವಮೋರ್ಚಾ ಗಡುವು: 24 ಗಂಟೆಯೊಳಗೆ ಬಂಧಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

September 1, 2026 11:11 PM

ಉಡುಪಿ: ಕೋಟಾದ ನಕಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಮುಖಂಡ ನಾಗೇಂದ್ರ ಪುತ್ರನ್ ವಿರುದ್ಧ ಸಾಲು ಸಾಲು ದೂರುಗಳು ಕೇಳಿಬರುತ್ತಿದ್ದು, ಆತನನ್ನು ಮುಂದಿನ 24 ಗಂಟೆಗಳ ಒಳಗಾಗಿ ಬಂಧಿಸದಿದ್ದಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ರೂಪಿಸುವುದಾಗಿ ಬಿಜೆಪಿ ಯುವಮೋರ್ಚಾ ಉಡುಪಿ ಗ್ರಾಮಾಂತರ ಅಧ್ಯಕ್ಷ ಸುಶಾಂತ್ ಪೂಜಾರಿ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.

ನಾಗೇಂದ್ರ ಪುತ್ರನ್ ವಿರುದ್ಧ ಪ್ರಸ್ತುತ ದಾಖಲಾಗಿರುವ ಪ್ರಕರಣಗಳಷ್ಟೇ ಅಲ್ಲದೆ, ಆತ ಸಾರ್ವಜನಿಕರು, ಗೂಡಂಗಡಿ ಮಾಲೀಕರು, ಹೋಟೆಲ್ ಉದ್ಯಮಿಗಳು, ಬೀದಿಬದಿ ವ್ಯಾಪಾರಿಗಳು ಹಾಗೂ ಕಲ್ಲು ಕೋರೆ ಮಾಲೀಕರಿಗೆ ಬೆದರಿಕೆ ಹಾಕಿ ಅಕ್ರಮವಾಗಿ ಹಣ ವಸೂಲಿ (ಹಫ್ತಾ ವಸೂಲಿ) ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದಿವೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಸುಶಾಂತ್ ಪೂಜಾರಿ, “ಆರೋಪಿಯ ಪೂರ್ವಾಪರ ಇತಿಹಾಸವನ್ನು ಪರಿಶೀಲಿಸಿ, ಅವರ ಅಕ್ರಮ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿ ಸಮಗ್ರ ತನಿಖೆ ನಡೆಸಬೇಕು. ಸಾರ್ವಜನಿಕರಿಗೆ ನಿರಂತರ ಕಿರುಕುಳ ನೀಡುತ್ತಿರುವ ಈತನನ್ನು ಪೊಲೀಸ್ ಇಲಾಖೆ ತಕ್ಷಣವೇ ಬಂದಿಸಬೇಕು. ಒಂದು ವೇಳೆ 24 ಗಂಟೆಯೊಳಗೆ ಆತನನ್ನು ಬಂಧಿಸದೇ ಇದ್ದರೆ ಬಿಜೆಪಿ ಯುವಮೋರ್ಚಾ ವತಿಯಿಂದ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಆಗ್ರಹಿಸಿದ್ದಾರೆ.

Harish Kiran Thunga

Harish Kiran Thunga is a journalist and editor based in Karnataka, India. He is actively involved in Udupi District Working Journalist Associations in the Udupi district. He serves as the Editor in Chief at Newsrays.in, a regional news portal. He also manages the Newsrays live YouTube channel, which features local news and short stories.

Join WhatsApp

Join Now

Leave a Comment

You cannot copy content of this page