ರಿಪ್ಪನ್‌ಪೇಟೆ: ಬಸ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಪಲ್ಟಿಯಾದ ಘಟನೆ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಬಳಿ ಮಂಗಳವಾರ ಸಂಭವಿಸಿದೆ.
ಘಟನೆಯಲ್ಲಿ ಆರು ಮಂದಿಗೆ ಗಾಯವಾಗಿದ್ದು, ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಗಂಭೀರ ಗಾಯಗೊಂಡವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಗಾಯಾಳುಗಳಿಗೆ ರಿಪ್ಪನ್‌ಪೇಟೆಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಹಿನ್ನೆಲೆ
ಚಿಕ್ಕಜೋನಿಯ ಸರಕಾರಿ ಶಾಲೆಯ ಬಳಿ ಈ ಘಟನೆ ಸಂಭವಿಸಿದ್ದು, ಹೊಸನಗರ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ತಮಿಳುನಾಡು ನೋಂದಣಿಯ ಲಾರಿ ಹೊಸನಗರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಬಸ್‌ನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಬಸ್‌ನಲ್ಲಿದ್ದವರನ್ನು ರಕ್ಷಿಸಿ ರಿಪ್ಪನ್‌ಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳ ಕುರಿತ ಇನ್ನಷ್ಟೆ ಲಭ್ಯವಾಗಬೇಕಿದೆ.