ಉಡುಪಿ: ಕಾಂಗ್ರೆಸ್‌ನ ಟ್ರಬಲ್‌ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿಕೆಶಿ ಇಂದು (ನ.2) ಕೊಲ್ಲೂರಿಗೆ ಭೇಟಿ ನೀಡಲಿದ್ದಾರೆ.
ಚೆನ್ನಪಟ್ಟಣ್ಣ ಸಂಡೂರು ಉಪಚುನಾವಣೆ ಹಿನ್ನೆಲೆ, ತಾಯಿ ಮೂಕಾಂಬಿಕೆಯ ದರ್ಶನ ಪಡೆದು ಚುನಾವಣಾ ಗೆಲುವಿಗೆ ಪ್ರಾರ್ಥನೆ ಸಲ್ಲಿಸಲು ಆಗಮಿಸಲಿರುವ ಡಿಕೆಶಿ, ತಾಯಿ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಶೇಷ ಸಂಕಲ್ಪ ಮಾಡಲಿದ್ದಾರೆ.
ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಬಗ್ಗೆ ಸಾಕಷ್ಟು ನಂಬಿಕೆ ಇಟ್ಟುಕೊಂಡಿರುವ ಡಿಕೆಶಿ, ಪ್ರತಿ ವಿಶೇಷ ಸಂದರ್ಭಗಳಲ್ಲಿ ಇಲ್ಲಿಗೆ ಭೇಟಿ ನೀಡುತ್ತಲೇ ಇರುತ್ತಾರೆ.
ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಸರಕಾರ ರಚನೆ ವೇಳೆ ನವಚಂಡಿಕಾಯಾಗವನ್ನು ಮಾಡಿದ್ದರು, ಲೋಕಸಭಾ ಚುನಾವಣೆ ವೇಳೆಯಲ್ಲೂ ಕೂಡ ಕೊಲ್ಲೂರು ದೇವಳಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು. ಇದೀಗ ಉಪಚುನಾವಣೆ ವೇಳೆಯಲ್ಲೂ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ್ದಾರೆ.
ಸಂಜೆ 4.00ಕ್ಕೆ ಆಗಮಿಸಲಿರುವ ಅವರು ದೇವರ ದರ್ಶನ ಪಡೆದು ಪುನಃ ಬೆಂಗಳೂರಿಗೆ ಮರಳಲಿದ್ದಾರೆ.