ಮಂಗಳೂರು: ನಗರದ ಹೊರವಲಯದ ಉಳ್ಳಾಲದ ಕಿನ್ಯಾ ಬಾಕಿಮಾರು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಗಾಂಜಾ ಮಾರಾಟ ದಂಧೆ ನಡೆಸುತ್ತಿದ್ದ ಮಹಿಳೆ ಹಾಗೂ ಓರ್ವ ಪುರುಷನನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳಿಂದ 8 ಕೆಜಿಯಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಉಳ್ಳಾಲದ ಕಿನ್ಯಾ, ಬಾಳೆಕಜೆ, ಬಾಕಿಮಾರು ನಿವಾಸಿಗಳಾದ ಶೇಕ್ ನಝೀರ್ ಹುಸೈನ್(50), ಅಪ್ಸಾತ್(37) ಬಂಧಿತ ಆರೋಪಿಗಳು.
ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ, ರೆಹಮತ್ ನಗರ ಕಜಿ ಬಾಕಿಮಾರು, ಎಂಬಲ್ಲಿ ಬಾಡಿಗೆ ಮನೆಯಲ್ಲಿಯೇ ಇವರಿಬ್ಬರು ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ದೊರತ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತರಿಂದ ಸುಮಾರು 2.04ಲಕ್ಷ ಮೌಲ್ಯದ 8ಕೆಜಿ ಗಾಂಜಾ ಹಾಗೂ ಮಾರಾಟ ಮಾಡಲು ಉಪಯೋಗಿಸುತ್ತಿದ್ದ ಕಾರು ಮತ್ತು ಮೊಬೈಲ್ ಫೋನ್ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 5,14,610 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.